ಹೊಸದಿಗಂತ ವರದಿ,ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ತಮ್ಮ ಪ್ರಯಾಣವನ್ನು ಮುಂದೂಡುವಂತೆ ಜಿಲ್ಲಾಡಳಿತ ಸೂಚಿಸಿದೆ.
ಹವಾಮಾನ ಇಲಾಖೆಯು ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಜು.31 ಹಾಗೂ ಆಗಸ್ಟ್ 1ರಂದು ರೆಡ್ ಅಲರ್ಟ್ ಘೋಷಿಸಿದೆ.
ಜಿಲ್ಲೆಯಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ಜಿಲ್ಲೆಯ ಕೆಲವು ರಸ್ತೆ ಸಂಪರ್ಕಗಳು ಅಲ್ಲಲ್ಲಿ ಕಡಿತಗೊಂಡಿದ್ದು, ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಈ ಎರಡು ದಿನಗಳಲ್ಲಿ ಕೊಡಗಿಗೆ ಭೇಟಿ ನೀಡಲು ಇಚ್ಛಿಸುವವರು ತಮ್ಮ ಪ್ರಯಾಣವನ್ನು ಮುಂದೂಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಸೂಚನೆ ನೀಡಿದ್ದಾರೆ.