ಹೊಸದಿಗಂತ ವರದಿ, ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.15ರಂದು ಜಿಲ್ಲೆಯ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ರಂಗಧಾಮಪ್ಪ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜು ಅವರು ತಿಳಿಸಿದ್ದಾರೆ.