ಹೊಸದಿಗಂತ ವರದಿ, ಮಡಿಕೇರಿ:
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪ್ರಭಾವ ಕೊಡಗು ಜಿಲ್ಲೆಯ ಮೇಲೂ ಬೀರಿದೆ.
ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಭಾನುವಾರ ರಾತ್ರಿಯಿಂದ ಕೊಡಗಿನ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ.
ಹವಾಮಾನ ಇಲಾಖೆಯು ಮಂಗಳವಾರ ಬೆಳಗ್ಗೆ 8.30ರವರೆಗೆ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ (ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ) ಮಂಗಳವಾರ (ಡಿ.3) ಒಂದು ದಿನದ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.