ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆ ಆರ್ಭಟಿಸಿದ್ದು, ಆಫೀಸ್ ಹಾಗೂ ಕೆಲಸಗಳಿಗೆ ತೆರಳುವ ಜನ ವರ್ಷಧಾರೆಯಿಂದ ಹೈರಾಣಾಗಿದ್ದಾರೆ.
ವಿವಿಧೆಡೆ ಶುಕ್ರವಾರ ಬೆಳಗ್ಗೆಯೇ ಗುಡುಗು ಸಹಿತ ಭಾರಿ ಮಳೆಯಾಗಿದೆ. ಸುಮಾರು ಒಂದು ಗಂಟೆಯಿಂದ ಎಡೆಬಿಡದೆ ವರ್ಷಧಾರೆ ಸುರಿದಿದೆ. ದಿಢೀರ್ ಮಳೆಯಿಂದಾಗಿ ಸಾರ್ವಜನಿಕರು ಪರದಾಡಿದ್ದಾರೆ. ದಿನನಿತ್ಯದ ಕೆಲಸಕ್ಕೆ ಹೋಗುವವರು, ವಿದ್ಯಾರ್ಥಿಗಳು ಕೊಡೆಯನ್ನೂ ತರದೇ ಪರದಾಡುವಂತಾಯಿತು.