ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲು ಕಡಿಮೆಯಾಗಿ ಇದೀಗ ನಿಧಾನಕ್ಕೆ ವರುಣನ ಆಗಮನ ಆಗುತ್ತಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆ ಬೀಳಲಿದೆ. ಇನ್ನುಳಿದಂತೆ ತುಮಕೂರು, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಕೋಲಾರ,ದಾವಣಗೆರೆ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಸಾಧಾರಣ ಮಳೆಯಾಗಲಿದೆ.
ಇಂದು ಹಾವೇರಿ, ಧಾರವಾಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ದಾವಣಗೆರೆ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 40.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.