ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ಮೇ 16ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಚಾಮರಾಜನಗರ ಹಾಗೂ ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆಲು ಭಾಗಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಇನ್ನೂ ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.