ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯೂಯಾರ್ಕ್ ನಗರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
ನಿನ್ನೆ ರಾತ್ರಿಯಿಡೀ ಮಳೆ ಸುರಿದಿದ್ದು, ಇಂದು ಕೂಡ ಧಾರಾಕಾರ ಮಳೆಯಾಗಲಿದೆ. ಗವರ್ನರ್ ಕಾಫಿ ಹ್ಯೂಚಲ್ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದು, ಮನೆಗಳಿಂದ ಹೊರಬಾರದಂತೆ ಜನರಿಗೆ ಸೂಚನೆ ನೀಡಿದ್ದಾರೆ.
ಮಳೆ ಪ್ರವಾಹದಿಂದ ಪ್ರಾಣಹಾನಿಯ ಬಗ್ಗೆ ಮಾಹಿತಿ ದೊರೆತಿಲ್ಲ, ಭಾರೀ ಮಳೆಯಿಂದಾಗಿ ರಸ್ತೆಗಳೆಲ್ಲ ಕೆರೆಯಂತಾಗಿವೆ. ಹಲವು ಪ್ರದೇಶಗಳು ಜಲಾವೃತವಾಗಿದ್ದು, ಎಲ್ಲೆಡೆ ನೀರು ಮಾತ್ರ ಕಾಣಿಸುತ್ತಿದೆ.
ನಗರದಲ್ಲಿ ಜನರು ಎಲ್ಲಿಯೂ ಹೋಗದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸುರಂಗ ಮಾರ್ಗಗಳು ನೀರಿನಿಂದ ತುಂಬಿದ್ದು, ಮೆಟ್ರೋ ಸೇವೆ ಸ್ಥಗಿತಗೊಂಡಿದೆ. ಮಳೆಯಿಂದಾಗಿ ವಿಮಾನ ಸೇವೆ ವಿಳಂಬವಾಗಿದೆ.