October 9, 2026
Friday, October 9, 2026
spot_img

ಬೆಂಗಳೂರಿನ ಹಲವು ಕಡೆ ಒಂದು ಗಂಟೆಯಿಂದ ಜೋರು ಮಳೆ: ಟ್ರಾಫಿಕ್‌ ಜಾಮ್‌, ಜನರಿಗೆ ಸಂಕಷ್ಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆ ಸುರಿದಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಮಂಗಳವಾರ ಸಂಜೆ ಆರು ಗಂಟೆಯಿಂದ ಏಳು ಗಂಟೆವರೆಗೂ ಜೋರು ಮಳೆ ಸುರಿದಿದ್ದು, ಜನ ಕಚೇರಿಯಿಂದ ವಾಪಾಸ್‌ ಮನೆಗೆ ಬರಲಾಗದೇ ಒದ್ದಾಡಿದ್ದಾರೆ.

ಬೆಂಗಳೂರಿನ ಶಾಂತಿನಗರ, ಕಲಾಸಿಪಾಳ್ಯ, ಸಿಟಿ ಮಾರ್ಕೇಟ್, ಜಯನಗರ, ವಿಲ್ಸನ್ ಗಾರ್ಡನ್, ಎಂಜಿ ರಸ್ತೆ, ವಿವೇಕ ನಗರ, ಕೋರಮಂಗಲ, ಎಚ್.ಎಸ್.ಆರ್ ಲೇಔಟ್, ಬೆಳ್ಳಂದೂರು, ವರ್ತೂರು, ಸರ್ಜಾಪುರ, ವೈಟ್ ಫೀಲ್ಡ್, ಕೆ.ಆರ್.ಪುರಂ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.

ಭಾರೀ ಮಳೆಯಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೆ ಆರ್ ಸರ್ಕಲ್ ಅಂಡರ್ ಪಾಸ್ ಕ್ಲೋಸ್ ಮಾಡಲಾಗಿದೆ. ಸಣ್ಣ ಮಳೆಗೂ ಕೆ ಆರ್ ಸರ್ಕಲ್ ಅಂಡರ್ ಪಾಸ್ ಜಲಾವೃತವಾಗುತ್ತೆ. ಹೀಗಾಗಿ ಪೊಲೀಸರು ಬ್ಯಾರಿಕೇಡ್ ಹಾಕಿ ಅಂಡರ್ ಪಾಸ್ ಬಂದ್ ಮಾಡಿದ್ದಾರೆ.

Must Read