Monday, October 13, 2025

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆ: ವಾಹನ ಸವಾರರು ಪರದಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದ್ದು, ಹಲವಡೆ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.

ಇಂದು ಸಂಜೆ 4.30 ಗಂಟೆಯಿಂದಲೇ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ಶಾಂತಿನಗರ, ಕೋರಮಂಗಲ, ರಿಚ್ಮಂಡ್ ಸರ್ಕಲ್, ಕಾರ್ಪೋರೇಷನ್, ಮೆಜೆಸ್ಟಿಕ್ ಸೇರಿದಂತೆ ಹಲವಡೆ ಭಾರೀ ಮಳೆಯಾಗುತ್ತಿದೆ.

ವಿಧಾನಸೌಧ, ಕೆ.ಆರ್. ವೃತ್ತ, ಕಾರ್ಪೋರೇಷನ್ ವೃತ್ತ, ಟೌನ್ ಹಾಲ್, ಕೆ.ಆರ್. ಮಾರ್ಕೆಟ್, ಹಡ್ಸನ್ ವೃತ್ತ, ಬಳ್ಳಾರಿ ರಸ್ತೆ, ಶಿವಾನಂದ ವೃತ್ತ, ಶಾಂತಿನಗರ, ಗುಟ್ಟಹಳ್ಳಿ, ಕಬ್ಬನ್ ಪಾರ್ಕ್, ಮೈಸೂರು ಬ್ಯಾಂಕ್ ವೃತ್ತದಲ್ಲಿ ಭಾರೀ ಮಳೆಯಾಗಿದೆ. ಮಳೆಯಿಂದ ವಾಹನ ಸವಾರರು, ಪಾದಚಾರಿಗಳ ಪರದಾಟ ನಡೆಸಿದ್ದಾರೆ.

error: Content is protected !!