Wednesday, September 3, 2025

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭರ್ಜರಿ ಮಳೆ: ವಾಹನ ಸವಾರರು ಪರದಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್ ಸಿಟಿಯಲ್ಲಿ ಭರ್ಜರಿ ಮಳೆಯಾಗುತ್ತಿದೆ. ಪ್ಯಾಲೇಸ್ ರಸ್ತೆ, ಮೇಖ್ರಿ ಸರ್ಕಲ್, ರಾಜಭವನ, ವಿಧಾನಸೌಧ, ಆನಂದ್ ರಾವ್ ಸರ್ಕಲ್, ಕಾರ್ಪೋರೇಷನ್, ಟೌನ್ ಹಾಲ್, ಲಾಲ್​ಬಾಗ್​, ಶಾಂತಿನಗರ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ.

ರಸ್ತೆಯಲ್ಲಿ ನೀರು ನಿಂತಿದ್ದರಿಂದ ವಾಹನ ಸಂಚಾರ ಕಷ್ಟವಾಗಿದೆ. ರಸ್ತೆ ಗುಂಡಿಗಳು ಕಾಣದೇ ವಾಹನ ಸವಾರರು ಪರದಾಟ ನಡೆಸಿದ್ದು, ಟ್ರಾಫಿಕ್ ಜಾಮ್ ಕೂಡ ಆಗಿದೆ.

ಇನ್ನು, ಸಂಜೆ ಮತ್ತು ರಾತ್ರಿ ಅವಧಿಯಲ್ಲಿ ಬೆಂಗಳೂರಲ್ಲಿ ಮಳೆಯಾಗುತ್ತಿದೆ. ಸೆಪ್ಟೆಂಬರ್ 6 ವರೆಗೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.0

ಇದನ್ನೂ ಓದಿ