Monday, September 1, 2025

ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆ: ವಾಹನ ಸವಾರರ ಪರಾದಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಲ್ಲಿ ಸಂಜೆ ಆಗುತ್ತಿದ್ದಂತೆ ಮಳೆ ಆರಂಭವಾಗಿದೆ. ಜಯನಗರ 4ನೇ ಬ್ಲಾಕ್, ರಾಜಾಜಿನಗರ, ಶಾಂತಿನಗರ, ಯಶವಂತಪುರ, ಕೆ.ಆರ್.ಮಾರುಕಟ್ಟೆ, ಮೈಸೂರು ರಸ್ತೆ, ವಿಜಯನಗರ, ಬಸವನಗುಡಿ, ಶ್ರೀನಿವಾಸನಗರ, ಕತ್ರಿಗುಪ್ಪೆ, ವಿದ್ಯಾಪೀಠ, ನಾಗರಬಾವಿ, ಬನಶಂಕರಿ ಸೇರಿದಂತೆ ಹಲವೆಡೆ ಮಳೆಯಾಗಿದೆ.

ನಾಯಂಡಹಳ್ಳಿ ರಸ್ತೆಯಲ್ಲಿ ನೀರು ನಿಂತು ಅವಾಂತರ ಸೃಷ್ಟಿಯಾಗಿದೆ. ಇದರಿಂದ ವಾಹನ ಸವಾರರು ಪರಾದಾಟ ನಡೆಸಿದ್ದಾರೆ.

ಕರಾವಳಿಯಲ್ಲಿ ಭಾರೀ ಮಳೆ
ಆರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆ ಸುರಿಯಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ಬಂಗಾಳ ಉಪಸಾಗರದ ಒರಿಸ್ಸಾ ಕರಾವಳಿಯಲ್ಲಿ ಚಂಡಮಾರುತ ಹಿನ್ನೆಲೆಯಲ್ಲಿ ಮಳೆಯ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ