ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರವೂ ಮಳೆ ಅಬ್ಬರ ಮುಂದುವರಿದಿದೆ.ಇದರಿಂದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣ ಉಂಟಾಗಿ, ವಾಹನ ಸವಾರರು ಹೈರಾಣಾದರು. ಹೆಬ್ಬಾಳ, ಬಾಗಲೂರು, ಬೆಳ್ಳಂದೂರು, ಆರ್.ಟಿ.ನಗರ, ಆರ್ ಆರ್ ನಗರ ಸೇರಿ ಹಲವೆಡೆ ಭಾರಿ ಮಳೆಯಾಗಿದ್ದು, ಕೆಲವೆಡೆ ರಸ್ತೆಗಳು ಜಲಾವೃತವಾಗಿದ್ದರಿಂದ ವಾಹನ ಸವಾರರು ಪರದಾಡಿದರು.
ಮಡಿವಾಳ ಅಯ್ಯಪ್ಪ ಅಂಡರ್ ಪಾಸ್, ರೂಬಿ 2 ಜಂಕ್ಷನ್, ವೀರಣ್ಣ ಪಾಳ್ಯ ರೈಲ್ವೆ ಗೇಟ್, ಕೆಇಬಿ ಜಂಕ್ಷನ್, ಕೊತ್ತನೂರು ಮುಖ್ಯರಸ್ತೆ, ಎಎಂಸಿ ಜಂಕ್ಷನ್, ಹೆಬ್ಬಾಳ ಅಪ್ಪರ್ ರ‍್ಯಾಂಪ್ ಬಳಿ ರಸ್ತೆಯಲ್ಲಿ ನೀರು ನಿಂತಿದ್ದರಿಂದ ನಿಧಾನಗತಿಯ ಸಂಚಾರವಿತ್ತು.
ಇನ್ನು ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಹವಾಮಾನ ಇಲಾಖೆಯಿಂದ ಆರೆಂಜ್‌ಅಲರ್ಟ್ ನೀಡಲಾಗಿದೆ. ಆದ್ದರಿಂದ ಜನರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.