Sunday, June 26, 2022

Latest Posts

ಇನ್ನೂ ಮೂರು ದಿನ ರಾಜ್ಯದ ಹಲವೆಡೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬಂಗಾಳಕೊಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಮಂತರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss