ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯಾಧ್ಯಂತ ಮುಂದಿನ 24 ಗಂಟೆಯಿಂದ ಸೆಪ್ಟೆಂಬರ್ 7ರವರೆಗೆ ಭಾರೀ ಮಳೆಯಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆ, ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 7ರವರೆಗೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಆರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಲಾಗಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಅನ್ನು ಬಾಗಲಕೋಟೆ, ಯಾದಗಿರಿ, ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲಿ ನೀಡಲಾಗಿದೆ.

ಇದಲ್ಲದೇ ಸೆ.4ರಂದು ಕೂಡ ವಿಜಯಪುರ, ಬಾಗಲಕೋಟೆ, ಬೆಳಗಾವಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಕಾರಣ, ಯೆಲ್ಲೋ ಅಲರ್ಟ್ ನೀಡಿದೆ.

ಕರಾವಳಿ ಜಿಲ್ಲೆಗಳಾದಂತ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ, ಮಲೆನಾಡಿನ ಕೊಡಗು, ಶಿವಮೊಗ್ಗ ಜಿಲ್ಲೆಯಲ್ಲಿ ಸೆಪ್ಟೆಂಬರ್ 6 ಮತ್ತು 7ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ಈ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!