ತಮಿಳುನಾಡಿನಲ್ಲಿ ಭಾರೀ ಮಳೆ, ರೆಡ್ ಅಲರ್ಟ್, ಶಾಲೆಗಳಿಗೆ ರಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ತಮಿಳುನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ ಚೆನ್ನೈ ಸೇರಿ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ತಿರುವಳ್ಳೂರು ಮತ್ತು ಕಾಂಚೀಪುರಂ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಚೆನ್ನೈ , ತಿರುವಳ್ಳೂರು ಮತ್ತು ಕಾಂಚೀಪುರ ಸೇರಿದಂತೆ ಆರು ಜಿಲ್ಲೆಗಳಿಗೆ ಚೆನ್ನೈ ಪ್ರಾದೇಶಿಕ ಹವಾಮಾನ ಕೇಂದ್ರ ರೆಡ್ ಅಲರ್ಟ್ ಘೋಷಿಸಿದೆ.

ಇನ್ನೂ ಎರಡು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋತ್ಯ ಬಂಗಾಳ ಕೊಲ್ಲಿ ಮತ್ತು ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಪರಿಚಲನೆಯಿಂದ ಭಾರೀ ಮಳೆ ಸುರಿಯಲಿದೆ ಎನ್ನಲಾಗಿದೆ. ಇದೇ ತಿಂಗಳಲ್ಲಿ ಎರಡನೇ ಬಾರಿ ತಮಿಳುನಾಡಿನ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!