Friday, July 1, 2022

Latest Posts

ಅ.17ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕಳೆದ ನಾಲ್ಕೈದು ದಿನದಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಅಕ್ಟೋಬರ್ 17 ರಂದು ಕೂಡ ದಕ್ಷಿಣ ಒಳನಾಡಿನಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 17ರಂದು ಎಲ್ಲೆಲ್ಲಿ ಮಳೆ?

ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ,ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ  ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಉತ್ತರ ಕನ್ನಡ,  ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.  ಇನ್ನುಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಪರಿಸ್ಥಿತಿ ಇನ್ನೂ ಎರಡು ದಿನ ಮುಂದುವರೆಯಲಿದೆ. ಇದರ ಪ್ರಭಾವದಿಂದ ಕೇರಳದಲ್ಲಿ ಇನ್ನೆರಡು ದಿನ ಮಳೆ  ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss