ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಲ್ಲಿ ಮುಂದಿನ ಮೂರು ದಿನದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ .

ಬೆಂಗಳೂರು ಸಹಿತ 17 ಜಿಲ್ಲೆಗಳಲ್ಲಿ ಅಕ್ಟೋಬರ್ 10ರ ನಾಳೆ ಹಾಗೂ ಅಕ್ಟೋಬರ್ 11ರ ನಾಡಿದ್ದು ಮಳೆಯಾಗಲಿದ್ದು, ದಕ್ಷಿಣ ಒಳನಾಡಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಬೆಳಗಾವಿ, ಗದಗ, ಯಾದಗಿರಿ ಜಿಲ್ಲೆಗಳಲ್ಲಿ ನಾಳೆ ನಾಡಿದ್ದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಮಗಳೂರು ಮಂಡ್ಯ, ರಾಮನಗರ, ದಾವಣಗೆರೆ, ಮೈಸೂರು, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ತಿಳಿಸಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದಂತ ಕಲಬುರ್ಗಿ, ವಿಜಯಪುರ, ಗದಗ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಯಲ್ಲೂ ಮಳೆ ಆಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!