Sunday, October 2, 2022

Latest Posts

ರಾಜ್ಯದಲ್ಲಿ ಇನ್ನೂ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಾಜ್ಯದಲ್ಲಿ ಇನ್ನೂ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ಕೂಡ ವರುಣ ಅಬ್ಬರಿಸಲಿದ್ದು, ಸಾಧಾರಣ ಹಾಗೂ ಹಗುರ ಮಳೆ ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆಯನ್ನು ಇಲಾಖೆ ನೀಡಿದೆ.
ಬೆಂಗಳೂರು ಸಿಟಿ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, 18 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮಳೆ ಅಲರ್ಟ್ ನೀಡಿದೆ.
ಬೆಂಗಳೂರು ಸಿಟಿ, ಬೆಂಗಳೂರು ಗ್ರಾಮಾಂತರ ಸೇರಿ ರಾಯಚೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿಗೆ ಮಳೆ ಅಲರ್ಟ್ ನೀಡಲಾಗಿದೆ. ನಾಳೆ ಮತ್ತು ನಾಡಿದ್ದು ದಕ್ಷಿಣ ಒಳನಾಡಿನ ಹಾಸನ ಕೊಡಗು ಭಾಗಕ್ಕೆ ರೆಡ್ ಅಲರ್ಟ್, ಚಿಕ್ಕಮಗಳೂರು ಮೈಸೂರು ಆರೆಂಜ್ ಅಲರ್ಟ್, ಮಂಡ್ಯ ಶಿವಮೊಗ್ಗ ಚಿತ್ರದುರ್ಗ ತುಮಕೂರು ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗಳಿಗೆ ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಮೂರನೇ ದಿನ ಚಿಕ್ಕಮಗಳೂರು ಕೊಡಗು ಆರೆಂಜ್ ಬಳ್ಳಾರಿ ಚಿತ್ರದುರ್ಗ ಶಿವಮೊಗ್ಗ ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಲ್ಕನೇ ದಿನ ಪಶ್ಚಿಮ ಘಟ್ಟದ ಜಿಲ್ಲೆಗಳು ಶಿವಮೊಗ್ಗ ಚಿಕ್ಕಮಗಳೂರು ಕೊಡಗು ಹಾಸನಕ್ಕೆ ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಈಶಾನ್ಯ ಹಾಗು ಪೂರ್ವ ಮಧ್ಯ ಬಂಗಾಳಕೊಲ್ಲಿಯಲ್ಲಿ ಸಮುದ್ರ ಮಟ್ಟದಲ್ಲಿ 5.8 ಕಿಮೀ ಎತ್ತರದವರೆಗೂ ಮೇಲ್ಮೈ ಸುಳಿಗಾಳಿ ಹಿನ್ನಲೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಜಾಸ್ತಿಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಅಂದಾಜಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!