March 23, 2026
Monday, March 23, 2026
spot_img

WEATHER |ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !