ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಈಶಾನ್ಯ ಭಾಗದ ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತವಾಗಿದ್ದು, ಈ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಜೂನ್ 12ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಇಂದಿನಿಂದ ಜೂನ್ 13ರವರಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂನ್ 9 ರಿಂದ 11 ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು , ಕರಾವಳಿ ಜಿಲ್ಲೆಗಳಲ್ಲಿ ಜೂನ್ 12, 13 ರಂದು ಅತ್ಯಂತ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ.ಈ ಹಿನ್ನೆಲೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡಿನಲ್ಲಿ ಇಂದಿನಿಂದ ಜೂನ್ 11ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲ್ಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬಹುದು ಎಂದಿರುವ ಇಲಾಖೆ, ಜೂನ್ 12, 13 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಕೊಡಗು ಜಿಲ್ಲೆಗಳಲ್ಲಿ ಜೂನ್ 12 , 13 ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಆ ದಿನಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿಕೆ ನೀಡಿದ್ದಾರೆ.