ಹೊಸದಿಗಂತ ವರದಿ, ಉಡುಪಿ:
ಕಳೆದ ಎರಡು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಶುಕ್ರವಾರ (ಜುಲೈ 01) ರಂದು ಎಲ್ಲಾ ಸರಕಾರಿ ಮತ್ತು ಖಾಸಗಿ ಶಾಲಾ, ಕಾಲೇಜಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶಿಸಿದ್ದಾರೆ.
ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ನದಿ ತೀರದ ಪ್ರದೇಶ, ಸಮುದ್ರ ತೀರ, ತಗ್ಗು ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.