ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು ರಜೆಯನ್ನು ಘೋಷಿಸಲಾಗಿದೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ, ಘೋಷಿಸಿರುವುದಿಲ್ಲ ಎಂದು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.