Wednesday, June 7, 2023

Latest Posts

ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭಾರೀ ‘ಮಳೆ’ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸೇರಿದಂತೆ ಮುಂದಿನ 4-5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮೈಸೂರು ಹಾಗೂ ಕೋಲಾರ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ.

ಹಾಗೂ ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ, ಬೀದರ್, ಕಲಬುರ್ಗಿ ಬೆಳಗಾವಿ, , ರಾಯಚೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಐದು ದಿನ ಮಳೆ

ಸಿಲಿಕಾನ್ ಸಿಟಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಂಡಮಾರುತದ ಪರಿಚಲನೆಯಿಂದಾಗಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗಬಹುದು ಎಂದು ಅವರು ಹೇಳಿದ್ದಾರೆ.
ಏಪ್ರಿಲ್ 26, 27, ಮತ್ತು 28 ರಂದು ಕರಾವಳಿ ಕರ್ನಾಟಕದ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಬಹುದು. ಕರ್ನಾಟಕದ ಒಳಭಾಗದಲ್ಲಿ ಏಪ್ರಿಲ್ 27 ಮತ್ತು 28 ರಂದು ತಡರಾತ್ರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!