ಭಾರೀ ಮಳೆ: ಕೊಡಗು ವಿಶ್ವವಿದ್ಯಾಲಯದ ಎರಡನೇ ಸೆಮಿಸ್ಟರ್ ಸ್ನಾತಕ ಪರೀಕ್ಷೆ ಮುಂದೂಡಿಕೆ

ಹೊಸದಿಗಂತ ವರದಿ,ಮಡಿಕೇರಿ:

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜು. 31ರ ಬುಧವಾರ ನಡೆಯಬೇಕಿದ್ದ ಕೊಡಗು ವಿಶ್ವವಿದ್ಯಾಲಯದ 2ನೇ ಸೆಮಿಸ್ಟರ್ ಸ್ನಾತಕ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮುಂದೂಡಿದ ಪರೀಕ್ಷೆಗಳ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು.

ಮಿಕ್ಕುಳಿದ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಮುಂದುವರಿದು ಎಲ್ಲಾ ಸ್ನಾತಕೋತ್ತರ ಪದವಿ ತರಗತಿಗಳಿಗೆ ಜು.31 ರಂದು ರಜೆ ಘೋಷಿಸಲಾಗಿದೆ ಎಂದು ಕೊಡಗು ವಿವಿಯ ಪರೀಕ್ಷಾಂಗ ಕುಲಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!