ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಎರಡು ದಿನಗಳ ಕಾಲ ಅರಬ್ಬಿ ಸಮುದ್ರದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ ಮೀನುಗಾರರಿಗೆ ಎಚ್ಚರಿಕೆ ನೀಡಿದ್ದು, ಕೂಡಲೇ ಸಮುದ್ರದಿಂದ ವಾಪಸಾಗುವಂತೆ ಸೂಚನೆ ನೀಡಿದೆ. ಹೀಗಾಗಿ ಹೆಚ್ಚಿನ ಮೀನುಗಾರಿಕಾ ದೋಣಿಗಳು ಮಂಗಳೂರು ಬಂದರಿನಲ್ಲಿ ಲಂಗರು ಹಾಕಿದೆ.