ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಮುಂದುವರೆದಿದೆ. ಮಾರ್ಚ್ 13 ರಿಂದ 15 ರವರೆಗೆ ದೆಹಲಿ-ಎನ್‌ಸಿಆರ್‌ನಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ವರದಿ ನೀಡಿದೆ.
ವೇಗದಲ್ಲಿ ಬಲವಾದ ಗಾಳಿ ಬೀಸಬಹುದು. ಹಾಗೂ ಮಾರ್ಚ್ 13 ರಿಂದ ಪಶ್ಚಿಮ ಉತ್ತರ ಪ್ರದೇಶದಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಪೂರ್ವ ಉತ್ತರ ಪ್ರದೇಶದಲ್ಲಿ ಹವಾಮಾನವು ಶುಷ್ಕವಾಗಿರುತ್ತದೆ. ಮಾರ್ಚ್ 14 ಮತ್ತು 15 ರಂದು ಪಶ್ಚಿಮ ಮತ್ತು ಪೂರ್ವ ಉತ್ತರ ಪ್ರದೇಶದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ರಾಜಸ್ಥಾನದಲ್ಲಿ ಬಿಸಿಲಿನ ಪ್ರಮಾಣ ನಿರಂತರವಾಗಿ ಹೆಚ್ಚುತ್ತಿದೆ. ಆದಾಗ್ಯೂ, ಮುಂದಿನ ದಿನಗಳಲ್ಲಿ ಬಿಕನೇರ್, ಜೈಪುರ ಮತ್ತು ಭರತ್‌ಪುರಗಳಲ್ಲಿ ಹಗುರ ಮಳೆಯಾಗಬಹುದು ಎಂದು ಇಲಾಖೆ ಹೇಳಿದೆ.
ದಕ್ಷಿಣ ಭಾರತದ ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕನ್ಯಾಕುಮಾರಿ, ತಿರುನಲ್ವೇಲಿ ಮತ್ತು ತೂತುಕುಡಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ಜೊತೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.