October 14, 2026
Wednesday, October 14, 2026
spot_img

WEATHER | ಮುಂದಿನ ನಾಲ್ಕು ದಿನ ಬೆಂಗಳೂರು ಸಹಿತ ರಾಜ್ಯದಲ್ಲಿ ಭಾರೀ ಮಳೆ ನಿರೀಕ್ಷೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕೊಡಗು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಾಳಿ, ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34.8°C ಮತ್ತು ಕನಿಷ್ಠ ತಾಪಮಾನ 23.8°C ಆಸುಪಾಸಿನಲ್ಲಿರಲಿದೆ. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

Must Read