June 15, 2026
Monday, June 15, 2026
spot_img

WEATHER | ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ, ಯೆಲ್ಲೋ ಅಲರ್ಟ್‌ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಸುರಿಯುವ ಮುನ್ಸೂಚನೆ ಇದೆ. ಇಂದು ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಸೂಚನೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಹಲವು ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಲಿದ್ದು, ಸಂಜೆಯೊಳಗೆ ಜನರು ಮನೆ ಸೇರುವುದು ಉತ್ತಮವಾಗಿದೆ.

ಎಲ್ಲೆಲ್ಲಿ ಯೆಲ್ಲೋ ಅಲರ್ಟ್‌?
ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಧಾರವಾಡ, ಗದಗ ಹಾಗೂ ಹಾವೇರಿಯಲ್ಲಿ ಜೋರು ಮಳೆ ಸುರಿಯಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಎಲ್ಲಾ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಸಮಯದಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಬಹುದು. ಭಾರಿ ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳನ್ನು ಹೊರತುಪಡಿಸಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಲಘುವಾಗಿ ಸಾಧಾರಣ ಮಳೆಯಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !