August 30, 2026
Sunday, August 30, 2026
spot_img

WEATHER | ಕರಾವಳಿಯಲ್ಲಿ ಇಂದು ಭಾರೀ ಮಳೆ ಸಾಧ್ಯತೆ, ನಾಲ್ಕು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಈಗಷ್ಟೇ ಮುಂಗಾರು ಚುರುಕೊಂಡಿದ್ದು, ಕರಾವಳಿಯಲ್ಲಿ ಇಂದು ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಾಲ್ಕು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಲೆನಾಡಿನ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಭಾಗದಲ್ಲಿಯೂ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಪುತ್ತೂರು, ಬೆಳ್ತಂಗಡಿ, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.

ಕರಾವಳಿ ಕರ್ನಾಟಕದಲ್ಲಿ ಗಾಳಿ ಮಳೆ ಸಾಧ್ಯತೆ

ಆಗಸ್ಟ್ 8ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಮುಂದಿನ ಅವಧಿಯಲ್ಲೂ ಮಳೆ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !