ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಹುತೇಕ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದರೊಂದಿಗೆ ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಇಂದು ಮಳೆ ಎಚ್ಚರಿಕೆ ನೀಡಲಾಗಿದೆ.