Sunday, October 12, 2025

ಹಾಸನಾಂಬ ದೇವಿಯ ದರುಶನದ ಮೊದಲ ದಿನವೇ ಭಾರೀ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಾಸನಾಂಬ ದೇವಿ ಸಾರ್ವಜನಿಕ ದರುಶನದ ಮೊದಲ‌ ದಿನವೇ ಹಾಸನ ಜಿಲ್ಲೆಯ ಬಹುತೇಕ ಕಡೆ ಭಾರಿ ಮಳೆಯಾಗುತ್ತಿದೆ.

ತಡರಾತ್ರಿಯಿಂದ ಹಾಸನ, ಹೊಳೆನರಸೀಪುರ, ಬೇಲೂರು, ಅರಕಲಗೂಡು, ಸಕಲೇಶಪುರ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇಂದು ಬೆಳಿಗ್ಗೆ ಆರು ಗಂಟೆಯಿಂದ ಸಾರ್ವಜನಿಕ ದರ್ಶನ ಆರಂಭಗೊಂಡಿದ್ದು ಮಳೆಯ ನಡುವೆಯೂ ಸಾವಿರಾರು ಭಕ್ತರು ದೇವಿಯ ದರುಶನ ಪಡೆದು ಪುನೀತರಾಗುತ್ತಿದ್ದಾರೆ.

ಭಾರೀ ಮಳೆಯಿಂದಾಗಿ ಹಾಸನಾಂಬ ಜಾತ್ರಾ ಮಹೋತ್ಸವದ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗೆ ತೊಂದರೆಯಾಗುತ್ತಿದೆ. ಕರ್ತವ್ಯಕ್ಕೆ ಬರಲಾಗದೇ ವಿವಿಧ ಇಲಾಖೆ ಸಿಬ್ಬಂದಿ ಪರದಾಟ ಅನುಭವಿಸುತ್ತಿದ್ದಾರೆ.

ಹಾಸನ ನಗರದ ಸೇರಿದಂತೆ ಹಲವೆಡೆ ರಾತ್ರಿಯಿಂದ ನಿರಂತರವಾಗಿ ಸತತ ಸತತ ಆರು ಗಂಟೆಗಳಿಂದ ಮಳೆಯಾಗುತ್ತಿದೆ. ಮಳೆಯ ನಡುವೆಯೂ ಸರತಿ ಸಾಲುಗಳಲ್ಲಿ ನಿಂತು ಸಹಸ್ರಾರು ಭಕ್ತರು ದರುಶನಕ್ಕೆ ಕಾದಿದ್ದಾರೆ. ಇಂದಿನಿಂದ 13 ದಿನ ಸಾರ್ವಜನಿಕ ಭಕ್ತರ ದರುಶನಕ್ಕೆ ಅವಕಾಶ ನೀಡಲಾಗಿದೆ.

error: Content is protected !!