Monday, August 15, 2022

Latest Posts

ಭಾರೀ ಗಾಳಿ, ಮಳೆಗೆ ಧರೆಗೆ ಉರುಳಿದ ವಿದ್ಯುತ್ ಕಂಬಗಳು: ಕೊಡಗಿನ ಬಹುತೇಕ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಜಿಲ್ಲೆಯ ಹಲವು ಕಡೆಗಳಲ್ಲಿ ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದ್ದು,ಬಹುತೇಕ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸೆಸ್ಕ್ ಸಿಬ್ಬಂದಿಗಳು ವಿದ್ಯುತ್ ಮಾರ್ಗ ಸರಿಪಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಮತ್ತೊಂದೆಡೆ ದಕ್ಷಿಣ ಕೊಡಗಿನಾದ್ಯಂತ ನಿರಂತರವಾಗಿ ಸುರಿದ ಮಳೆಯಿಂದಾಗಿ, ಪೊನ್ನಂಪೇಟೆ -ಹುದಿಕೇರಿ ರಸ್ತೆಯ ಮಾಪಿಳೆತೋಡು ತಿರುವಿನಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸೇತುವೆಯ ಸಂಪರ್ಕ ರಸ್ತೆಗೆ ಹಾಕಿದ ಮಣ್ಣು ಕುಸಿದಿದೆ.
ಶನಿವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆಯೊಂದಕ್ಕೆ ಹಾನಿಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss