August 30, 2026
Sunday, August 30, 2026
spot_img

ಭಾರೀ ಮಳೆ ಎಫೆಕ್ಟ್‌: ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ಆಗಸ್ಟ್‌ 3ರಂದು ರಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ಆಗಸ್ಟ್‌ 3ರಂದು ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಶಿವಮೊಗ್ಗ ಸೇರಿದಂತೆ ಕೆಲ ಜಿಲ್ಲೆಗಳಿಗೆ ರೆಡ್‌ ಹಾಗೂ ಆರೆಂಜ್‌ ಅಲರ್ಟ್‌ ನೀಡಿರುವುದರಿಂದ ಜಿಲ್ಲಾಡಳಿತಗಳು ಈ ನಿರ್ಧಾರ ಕೈಗೊಂಡಿವೆ.

ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ರಜೆ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮತ್ತು ಶೃಂಗೇರಿ ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ತುಂಗಾ ನದಿ ತೀರಕ್ಕೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ:

ಉತ್ತರ ಕನ್ನಡದ ಎರಡು ತಾಲೂಕುಗಳಲ್ಲಿ ರಜೆ

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಮತ್ತು ಜೋಯಿಡಾ ತಾಲೂಕುಗಳಲ್ಲಿ ಅಂಗನವಾಡಿಯಿಂದ ಪ್ರೌಢಶಾಲೆಯವರೆಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಮುನ್ನೆಚ್ಚರಿಕೆಗೆ ಜಿಲ್ಲಾಡಳಿತ ಒತ್ತು

ಭಾರೀ ಮಳೆಯ ಹಿನ್ನೆಲೆ ತುರ್ತು ಪರಿಸ್ಥಿತಿಗೆ ಸ್ಪಂದಿಸಲು ಅಧಿಕಾರಿಗಳು ಸಜ್ಜಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಸಾರ್ವಜನಿಕರು ನದಿ, ಹೊಳೆ ಹಾಗೂ ಗುಡ್ಡ ಪ್ರದೇಶಗಳಿಗೆ ತೆರಳದಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !