ಹಿಮಾಲಯದಲ್ಲಿ ಭಾರೀ ಮಳೆ, ಹಿಮಪಾತ: ಕೇದಾರನಾಥ ಯಾತ್ರಾರ್ಥಿಗಳಿಗೆ ತಂಗಿರುವ ಸ್ಥಳದಲ್ಲಿಯೇ ಇರಲು ಸೂಚನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹಿಮಾಲಯದಲ್ಲಿ ಭಾರೀ ಮಳೆ (Rain) ಮತ್ತು ಹಿಮಪಾತವಾಗುವ (Snowfall) ಸಾಧ್ಯತೆಯ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆಯು ಮುಂದಿನ 2-3 ದಿನಗಳವರೆಗೆ ಎಚ್ಚರಿಕೆಯನ್ನು ನೀಡಿದೆ. ಕೇದಾರನಾಥ ಹೊರಟ ಯಾತ್ರಾರ್ಥಿಗಳಿಗೆ ತಂಗಿರುವ ಸ್ಥಳದಲ್ಲಿಯೇ ಇರುವಂತೆ ಸೂಚಿಸಿದೆ.

ಕೇದಾರನಾಥಕ್ಕೆ ಭೇಟಿ ನೀಡುವ ಬರುವ ಯಾತ್ರಾರ್ಥಿಗಳ ಸುರಕ್ಷತೆಗಾಗಿ ಮನವಿ ಮಾಡಲಾಗುತ್ತಿದೆ. ಹವಾಮಾನ ಉತ್ತಮವಾಗುವವರೆಗೆ ಪ್ರಯಾಣಿಕರು ಅದೇ ಸ್ಥಳದಲ್ಲಿ ಇರಿ. ಮುಂಜಾಗೃತ ಕ್ರಮಗಳನ್ನು ಅನುಸರಿಸಿಯೇ ಯಾತ್ರೆಯನ್ನು ಮುಂದುವರಿಸಿ ಎಂದು ರುದ್ರಪ್ರಯಾಗದ ಜಿಲ್ಲಾಧಿಕಾರಿ ಮಯೂರ್ ದೀಕ್ಷಿತ್ ಹೇಳಿದರು.

ಕೇದಾರನಾಥ ಧಾಮದಲ್ಲಿ ನಿರಂತರವಾಗಿ ಹಿಮಪಾತವಾಗುತ್ತಿದ್ದು,ಸೋನ್‌ಪ್ರಯಾಗದಿಂದ ಬೆಳಗ್ಗೆ 10:30ರ ಬಳಿಕ ಕೇದಾರನಾಥಕ್ಕೆ ಹೋಗಲು ಅನುಮತಿ ನೀಡಲಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ಪ್ರಯಾಣಿಕರು ತಮ್ಮ ಸುರಕ್ಷತೆಯ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಹೊರಡಿಸಿರುವ ಮಾರ್ಗಸೂಚಿಗಳನ್ನು ಅನುಸರಿಸಿ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಹವಾಮಾನ ಉತ್ತಮವಾದ ಬಳಿಕ ಮಾತ್ರ ಎಲ್ಲಾ ಯಾತ್ರಾರ್ಥಿಗಳು ಕೇದಾರನಾಥಕ್ಕೆ ತಮ್ಮ ಪ್ರಯಾಣವನ್ನು ಬೆಳೆಸಬಹುದು ಎಂದು ದೀಕ್ಷಿತ್ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!