ದಕ್ಷಿಣ ಭಾರತದಲ್ಲಿ ಆ.6ರವರೆಗೆ ಭಾರೀ ಮಳೆ ಮುಂದುವರಿಕೆ: ಹವಾಮಾನ ಇಲಾಖೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ ಮುಂದಿನ ಎರಡರಿಂದ ಮೂರು ದಿನಗಳವರೆಗೆ ದಕ್ಷಿಣ ಪೆನಿನ್ಸುಲರ್ ಭಾರತದಲ್ಲಿ ವಿಶೇಷವಾಗಿ ಕೇರಳ, ಕರಾವಳಿ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯು ಮುಂದುವರಿಯುವ ಸಾಧ್ಯತೆಯಿದೆ. ದೇಶದ ಮಧ್ಯ ಭಾಗಗಳಲ್ಲಿ ಕಡಿಮೆ ಮಳೆಯ ಚಟುವಟಿಕೆಯು ಆಗಸ್ಟ್ 4 ರವರೆಗೆ ಮುಂದುವರಿಯುವ ಸಾಧ್ಯತೆಯಿದೆ ಮತ್ತು ನಂತರ ಕ್ರಮೇಣ ಹೆಚ್ಚಾಗುವ ನಿರೀಕ್ಷೆಯಿದೆ.

“ಕೇರಳ ಮತ್ತು ಮಾಹೆ ಮತ್ತು ತಮಿಳುನಾಡಿನಲ್ಲಿ ಆ. 2 ರಿಂದ 4 ರವೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಆ. 3ರಿಂದ 5ರವರೆಗೆ ಕರ್ನಾಟಕದ ಒಳನಾಡು ಪ್ರದೇಶಗಳಲ್ಲಿ ಮತ್ತು ಆಗಸ್ಟ್‌ 2ರಿಂದ 5ರ ವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ” ಎಂದು ಹವಾಮಾನ ಇಲಾಖೆಯು ತನ್ನ ಬುಲೆಟಿನ್‌ ನಲ್ಲಿ ತಿಳಿಸಿದೆ.

ಇದೇ ರೀತಿಯ ಹವಾಮಾನವು ತೆಲಂಗಾಣ, ಕರ್ನಾಟಕ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕೇರಳ ಮತ್ತು ಮಾಹೆಯಲ್ಲಿ ಶನಿವಾರದವರೆಗೆ ಇರುತ್ತದೆ ಎಂದು ಅಂದಾಜಿಸಲಾಗಿದ್ದು ಆಗಸ್ಟ್ 6 ರಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾದ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!