WEATHER | ಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಎರಡು ವಾರಗಳಿಂದ ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿಗೆ ಮಳೆರಾಯನ ಆಗಮನವಾಗಿದೆ. ಸೋಮವಾರ ರಾತ್ರಿ ಒಂದು ಗಂಟೆಗಳ ಕಾಲ ಅಲ್ಲಲ್ಲಿ ಮಳೆ ಸುರಿದಿದೆ.

ಇಂದು ಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಹಿಡಕಲ್, ನಿಪ್ಪಾಣಿ, ಬೀದರ್, ಬೆಂಗಳೂರು, ಆಲಮಟ್ಟಿ, ಮಂಗಳೂರು, ಹುಣಸಗಿ, ಮುಲ್ಕಿ, ಗೌರಿಬಿದನೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು ಕೂಡ ಮೋಡಕವಿದ ವಾತಾವರಣವಿರಲಿದ್ದು, ಮಳೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!