ಹೊಸದಿಗಂತ ವರದಿ,ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಹಲವಡೆ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊನ್ನoಪೇಟೆ ಹಾಗೂ ವೀರಾಜಪೇಟೆ ತಾಲೂಕು ವ್ಯಾಪ್ತಿಯ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಗುರುವಾರ (ಜೂನ್ 27) ಒಂದು ದಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಈ ಕುರಿತು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ನಿರ್ದೇಶನದಂತೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್ ಅವರು ಆದೇಶ ಹೊರಡಿಸಿದ್ದಾರೆ.