ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವ ಕಾರಣ ಔಟರ್ ರಿಂಗ್ ರಸ್ತೆಯ ಕಂಪನಿಗಳು ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಅವಕಾಶ ನೀಡುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.
ಮಳೆಯಿಂದ ಆಗಬಹುದಾದ ಅವಾಂತರ ತಪ್ಪಿಸುವುದಕ್ಕೆ ಪ್ರಯತ್ನಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಇಂದು ಸಿಬ್ಬಂದಿಗೆ ವರ್ಕ್ ಫ್ರಮ್ ಹೊಮ್ ನೀಡುವಂತೆ ಸಂಚಾರಿ ಜಂಟಿ ಆಯುಕ್ತ ಎಂಎನ್ ಅನುಚೇತ್ ಮನವಿ ಮಾಡಿದ್ದಾರೆ.
ದೀರ್ಘ ವಾರಾಂತ್ಯದ ಜೊತೆಗೆ ನಿರೀಕ್ಷಿತ ಭಾರೀ ಮಳೆ ಸಾಧ್ಯತೆ ಇದೆ. ಹೀಗಾಗಿ ಆಗಸ್ಟ್ 14ರಂದು ಭಾರೀ ಸಂಚಾರ ದಟ್ಟಣೆಯನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಅಡೆತಡೆಗಳನ್ನು ಕಡಿಮೆ ಮಾಡಲು ಮತ್ತು ಅನಗತ್ಯ ವಿಳಂಬಗಳನ್ನು ತಪ್ಪಿಸಲು 14ರಂದು ತಮ್ಮ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡಲುಸೂಚಿಸಬೇಕು ಎಂದು ಅನುಚೇತ್ ಮನವಿ ಮಾಡಿದ್ದಾರೆ.
ಹೀಗೆ ಮಾಡುವುದರಿಂದ ರಸ್ತೆಯಲ್ಲಿ ವಾಹನಗಳ ಸಂಖ್ಯೆ ಕಡಿಮೆಯಾಗುತ್ತದೆ. ಪ್ರಯಾಣಿಸಬೇಕಾದ ಎಲ್ಲರಿಗೂ ಸುಗಮ ಪ್ರಯಾಣವನ್ನು ಖಚಿತಪಡಿಸುತ್ತದೆ. ಈ ವಿಷಯದಲ್ಲಿ ನಿಮ್ಮ ಸಹಕಾರವನ್ನು ನಾವು ಪ್ರಶಂಸಿಸುತ್ತೇವೆ. ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಿಸುವಲ್ಲಿ ನಿಮ್ಮ ಬೆಂಬಲ ಅಗತ್ಯ ಎಂದು ಪತ್ರ ಮುಖೇನ ಅನುಚೇತ್ ಮನವಿ ಮಾಡಿದ್ದಾರೆ.