ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಕರಾವಳಿ ಜಿಲ್ಲೆಗಳಲ್ಲಿ ಇಂದು ಸಂಜೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ನವಿ ಮುಂಬೈ, ಥಾಣೆ ಮತ್ತು ರಾಯಗಢ ಜಿಲ್ಲೆಯ ಹಲವಾರು ತಾಲೂಕುಗಳು ಸೇರಿದಂತೆ ಮುಂಬೈ ಮಹಾನಗರ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಭಾರೀ ಮಳೆಯಾಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುಂಬೈ, ಥಾಣೆ, ಪಾಲ್ಘರ್ ಮತ್ತು ರಾಯ್ಗಡ್ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಐಎಂಡಿ ತಿಳಿಸಿದೆ.