ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಯಾರಿಗೆಲ್ಲ ರಜೆ?

ಹೊಸದಿಗಂತ ವರದಿ,ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಜು.11ರಂದು ಸೋಮವಾರವೂ ಅಂಗನವಾಡಿ ಕೇಂದ್ರ, ಎಲ್ಲ ಖಾಸಗಿ, ಅನುದಾನಿತ ಮತ್ತು ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕಾಲೇಜುಗಳಿಗೆ ರಜೆ ಇಲ್ಲ. ಪದವಿಪೂರ್ವ ಕಾಲೇಜು, ಪದವಿ ಕಾಲೇಜು ಮತ್ತು ಇತರ ವೃತ್ತಿಪರ ಕಾಲೇಜು ವಿದ್ಯಾರ್ಥಿಗಳಿಗೆ ಸೋಮವಾರದಿಂದ ತರಗತಿಗಳು ನಡೆಯಲಿವೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!