ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ ಇಂದು ಆಲಿಕಲ್ಲು ಸಹಿತ ಭಾರೀ ಮಳೆ ಹಲವೆಡೆಯಾಗುತ್ತಿದೆ. ಹೀಗಾಗಿ ಅಲ್ಲಲ್ಲಿ ಸಂಚಾರ ದಟ್ಟಣೆ ಕೂಡ ಉಂಟಾಗಿದೆ.
ಬೆಂಗಳೂರಿನ ಸಂಜಯನಗರ, ಭೂಪಸಂದ್ರ, ಹೆಬ್ಬಾಳ, ಮೇಖ್ರಿ ಸರ್ಕಲ್ ಸೇರಿದಂತೆ ಹಲವೆಡೆ ದಿಢೀರ್ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗುತ್ತಿದೆ.
ಕೆಲ ದಿನಗಳ ಹಿಂದಷ್ಟೇ ಮೆಜೆಸ್ಟಿಕ್, ಶಾಂತಿನಗರ, ಕೆ ಆರ್ ಮಾರ್ಕೆಟ್, ಹಲಸೂರು, ಜಯನಗರ ಸೇರಿದಂತೆ ವಿವಿಧೆಡೆ ಮಳೆಯಾಗಿತ್ತು. ಭಾರೀ ಮಳೆಯಿಂದಾಗಿ ಬೆಂಗಳೂರು ಜನತೆ ಬಿಸಿಲಿನ ಝಳಕ್ಕೆ ತಂಪನ್ನು ಎರೆಯಲಾಗಿತ್ತು.