ಸಿಲಿಕಾನ್ ಸಿಟಿಯಲ್ಲಿ ಗುಡುಗು ಸಹಿತ ಭಾರೀ ಮಳೆ

ಹೊಸದಿಂತ ಡಿಜಿಟಲ್‌ ಡೆಸ್ಕ್:‌

ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ವೇಳೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ.

ಮುಂಜಾನೆಯಿಂದ ಮೋಡಕವಿದ ವಾತಾವರಣವಿದ್ದ ಸಿಲಿಕಾನ್ ಸಿಟಿಯಲ್ಲಿ ಸಂಜೆ ವೇಳೆ ದಿಢೀರ್ ಆರಂಭವಾದ ವರುಣಾರ್ಭಟಕ್ಕೆ ಹಲವೆಡೆ ರಸ್ತೆ ಮಾರ್ಗಗಳು ಜಲಾವೃತಗೊಂಡಿದ್ದು, ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ.

ಆರ್. ಆರ್. ನಗರ, ನಾಯಂಡಹಳ್ಳಿ,ಹೊಸಕೆರೆಹಳ್ಳಿ, ಗಿರಿನಗರ, ಮೈಸೂರು ರಸ್ತೆ, ರಾಜಾಜಿನಗರ, ವಿಜಯನಗರ ಸೇರಿದಂತೆ ಹಲವೆಡೆಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಟ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!