ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಮುಂಬೈ, ಥಾಣೆ, ಪಾಲ್ಘರ್, ರಾಯಗಢ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶನಿವಾರದಿಂದ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಐಎಂಡಿ ಅಧಿಕಾರಿಗಳು ಈ ಭಾಗಗಳಲ್ಲಿ ಹಳದಿ ಅಲರ್ಟ್ ಘೋಷಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿಯೂ 18ರವರೆಗೆ ಭಾರೀ ಮಳೆಯಾಗಲಿದ್ದು, ಪ್ರವಾಹ ಇನ್ನಿತರೆ ಕಾರಣಗಳಿಂದ ಬರೋಬ್ಬರಿ 108 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಂತೆಯೇ ಪ್ರವಾಹ ಪರಿಸತಿತಿ ಮುಂದುವರೆದಿದ್ದು, ಕೇಂದ್ರ ಸರ್ಕಾರ ಪ್ರವಾಹ ನೆರವು ಘೋಷಿಸಿದೆ. ಹಿಮಾಚಲ ಪ್ರದೇಶದ ಕಸೋಲ್ನಲ್ಲಿ ಪ್ರವಾಹದಿಂದಾಗಿ ಕಡಿತಗೊಂಡಿರುವ ರಸ್ತೆಯನ್ನು ಶನಿವಾರ ಪುನಃಸ್ಥಾಪಿಸಲಾಗುತ್ತದೆ.
ಶುಕ್ರವಾರ ರಾತ್ರಿಯಿಂದ ಯಮುನಾ ನದಿಯಲ್ಲಿ ನೀರಿನ ಮಟ್ಟ ಇಳಿಮುಖವಾಗಿದ್ದರೂ ದೆಹಲಿಯ ಹಲವು ಭಾಗಗಳು ನೀರಿನಿಂದ ಜಲಾವೃತವಾಗಿದೆ. ಶುಕ್ರವಾರ ರಾತ್ರಿ 11 ಗಂಟೆಗೆ ಹಳೆ ರೈಲ್ವೆ ಸೇತುವೆಯಲ್ಲಿ ಯಮುನಾ ನದಿಯ ನೀರಿನ ಮಟ್ಟ 207.98 ಮೀಟರ್ಗೆ ಕುಸಿದಿದೆ.
ಕಸೋಲ್, ಬಂಜಾರ್ ಮತ್ತು ತೀರ್ಥನ್ ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಅನ್ನು ಮರುಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ಟ್ವೀಟ್ ಮಾಡಿದ್ದಾರೆ. ಮುಂಬೈ ನಗರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ IMD ಅಧಿಕಾರಿಗಳು ಹಳದಿ ಅಲರ್ಟ್ ಘೋಷಿಸಿದ್ದಾರೆ.