WEATHER |ಮುಂದುವರಿದ ವರುಣನ ಅಬ್ಬರ, ಇನ್ನೂ ಕೆಲವು ದಿನ ಭಾರೀ ವರ್ಷಧಾರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ಮುಂದಿನ ಕೆಲವು ದಿನಗಳು ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬಾಗಲಕೋಟೆ, ಕಲಬುರಗಿ, ವಿಜಯಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿದ್ದು, ಹಾಸನ, ಕೊಡಗು, ಮೈಸೂರು ಭಾಗಗಳಿಗೆ ಯೆಲ್ಲೋ ಅಲರ್ಟ್‌ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯದಲ್ಲಿ ಮಾಮೂಲಿಯಾದಂತಹ ಮಳೆ ಬೀಳಬಹುದು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಬಳ್ಳಾರಿ, ವಿಜಯನಗರ ಹಾಗೂ ಚಿತ್ರದುರ್ಗದಲ್ಲಿ ಸಾಧಾರಣ ಮಳೆಯಾಗಲಿದೆ.