ಚುರುಕಾಯ್ತು ಮುಂಗಾರು: ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್‌
ಕೊನೆಗೂ ಮುಂಗಾರು ಚುರುಕುಗೊಂಡಿದೆ.
ಕರಾವಳಿಯಲ್ಲಿ‌ ಮಳೆ, ಮೋಡದ ವಾತಾವರಣ ಮುಂದುರಿದಿದ್ದು, ಮುಂದಿನ 10 ದಿನಗಳವರೆಗೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.
ಜೂ.30ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳು, ಭಟ್ಕಳ, ಹೊನ್ನಾವರ ಭಾರಿ ಮಳೆಯ ಸಾಧ್ಯತೆ ಇದೆ.
ಕೊಡಗು, ಬೆಂಗಳೂರು, ರಾಮನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು ಶಿವಮೊಗ್ಗ ಅಲ್ಲಲ್ಲಿ ಉತ್ತಮ ಮಳೆ, ಮೈಸೂರು, ಮಂಡ್ಯ, ಹಾಸನ, ಹಾವೇರಿ, ದಾವಣಗೆರೆ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಕೊಪ್ಪಳ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!