ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಸೆಪ್ಟೆಂಬರ್ 15ರವರೆಗೂ ವರುಣ ಆರ್ಭಟಿಸಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಎಲ್ಲೆಲ್ಲಿ ಅಧಿಕ ಮಳೆ?
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಎಂದು ಭಾರತಿಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಳದೆ ಎರಡು ದಿನಗಳಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ರಾಯಚೂರು, ಯಾದಗಿರಿ, ಬೆಳಗಾವಿ, ಮೈಸೂರು, ಕೊಪ್ಪಳ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ ಎಂದೂ ಹವಾಮಾನ ಇಲಾಖೆ ವರದಿ ಹೇಳಿದೆ.