September 30, 2026
Wednesday, September 30, 2026
spot_img

ರಾಜಧಾನಿಯಲ್ಲಿ ವರುಣಾರ್ಭಟ: ನಾಳೆಯೂ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರಿನಲ್ಲಿ ಸದ್ಯಕ್ಕೆ ವರುಣನದೇವ ಬಿಡುವು ಪಡೆಯುವ ಲಕ್ಷಣ ಕಾಣಿಸುತ್ತಿಲ್ಲ. ಕಳೆದ ಎರಡು ದಿನಗಳಿಂದ ತಡರಾತ್ರಿ ಅಥವಾ ಮುಂಜಾನೆ ವೇಳೆ ಅಬ್ಬರಿಸುತ್ತಿದ್ದ ಮಳೆ, ಇಂದು ಕಚೇರಿ ಬಿಡುವ ಸಂಜೆ ವೇಳೆಗೆಲ್ಲಾ ಪ್ರತ್ಯಕ್ಷನಾಗಿದ್ದಾನೆ.

ನಗರದ ಪ್ರಮುಖ ಭಾಗಗಳಾದ ರಿಚ್ಮಂಡ್ ಟೌನ್, ಶಾಂತಿನಗರ, ಎಂ.ಜಿ. ರಸ್ತೆ, ಕಾರ್ಪೊರೇಷನ್ ವೃತ್ತ, ಕೆ.ಆರ್. ಮಾರ್ಕೆಟ್ ಹಾಗೂ ಸರ್ಜಾಪುರ ರಸ್ತೆ ಸೇರಿದಂತೆ ನಗರದ ಪ್ರಮುಖ ಐಟಿ ಹಬ್ ಮತ್ತು ಮಾರುಕಟ್ಟೆ ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಕಚೇರಿ ಮುಗಿಸಿ ಮನೆಗೆ ಮರಳುತ್ತಿದ್ದ ಉದ್ಯೋಗಿಗಳು ಹಾಗೂ ದ್ವಿಚಕ್ರ ವಾಹನ ಸವಾರರು ಮಳೆಗೆ ಸಿಲುಕಿ ಪರದಾಡುವಂತಾಯಿತು.

ಹಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಪ್ರಭಾವ ಇನ್ನು ತಗ್ಗಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ಕರಾವಳಿ, ಮಲೆನಾಡು ಹಾಗೂ ಹಳೆ ಮೈಸೂರು ಭಾಗದ ಒಟ್ಟು 8 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ಘೋಷಿಸಿದೆ.

ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ:

ಉತ್ತರ ಕರ್ನಾಟಕದ ಕೆಲವು ಕಡೆ ಸಾಧಾರಣ ಮಳೆ, ಉಳೆಡೆ ಒಣಹವೆ

ಇನ್ನೊಂದೆಡೆ, ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಧಾರವಾಡ, ಗದಗ ಮತ್ತು ಕೊಪ್ಪಳ ಜಿಲ್ಲೆಗಳ ಹಲವೆಡೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ. ಆದರೆ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ.

Must Read