ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಕೊಂಚ ಮಂದಹಾಸ ಮೂಡಿದೆ.
ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆರಾಯ ಇದೀಗ ಮತ್ತೆ ಅಬ್ಬರಿಸುತ್ತಿದ್ದು, ಜಿಲ್ಲೆಯ ಕೆಲವು ಕಡೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.
ಕೆಲವು ಕಡೆಗಳಲ್ಲಿ ಭಾರೀ ಮಳೆಯಿಂದಾಗಿ ಮನೆ, ಗುಡಿಸಲುಗಳಿಗೆ ನೀರು ನುಗ್ಗಿದೆ. ಜೊತೆಗೆ ರಸ್ತೆ, ಹೊಲ, ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದೆ.
ಧಾರವಾಡ ಸೇರಿದಂತೆ ಹಲವೆಡೆ ಇಂದು ಮಧ್ಯಾಹ್ನ ಭಾರೀ ಮಳೆಯಾಗಿದ್ದು, ಅನೇಕ ರಸ್ತೆಗಳು ಜಲಾವೃತಗೊಂಡಿವೆ. ಜೊತೆಗೆ ಕೆಲವು ಮನೆಗಳಿಗೆ ನೀರು ನುಗ್ಗಿ, ಜನಜೀವನ ಅಸ್ತವ್ಯಸ್ತಗೊಂಡಿದೆ.