July 6, 2026
Monday, July 6, 2026
spot_img

ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ : ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಹೊಸದಿಗಂತ ವರದಿ ಶಿವಮೊಗ್ಗ:

ಹೊಸನಗರ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂದು (ಜುಲೈ 6, ಸೋಮವಾರ) ಎಲ್ಲಾ ಶಾಲೆ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.

ತಾಲೂಕಿನಲ್ಲಿ ಭಾರಿ ಮಳೆಯೊಂದಿಗೆ ಗಾಳಿ ತೀವ್ರವಾಗಿ ಬೀಸುತ್ತಿರುವ ಕಾರಣ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ತಹಶೀಲ್ದಾರ್ ಭರತ್ ರಾಜ್ ಆದೇಶ ಹೊರಡಿಸಿದ್ದಾರೆ.

ರಜೆ ಆದೇಶವು ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಹಾಗೂ ಅಂಗನವಾಡಿ ಕೇಂದ್ರಗಳಿಗೆ ಅನ್ವಯವಾಗಲಿದೆ.

ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಪಾಲಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ತಹಶೀಲ್ದಾರ್ ಭರತ್ ರಾಜ್ ಮನವಿ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !