ಹೊಸದಿಗಂತ ವರದಿ,ಕಲಬುರಗಿ:
ಕಲಬುರಗಿ ಜಿಲ್ಲೆಯಾದ್ಯಂತ ಬುಧವಾರ ಸಂಜೆ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ನಗರದ ಬಹುತೇಕ ರಸ್ತೆಗಳು ಸಂಪೂರ್ಣವಾಗಿ ಜಲಾವೃತವಾಗಿರುವ ದೃಶ್ಯಗಳು ಕಂಡುಬಂದಿವೆ
ಕಳೆದ ಎರಡು ದಿನಗಳಿಂದ ಸಂಜೆ ಹೊತ್ತಿಗೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳಾದ ಜಗತ್ ವೃತ್ತದಲ್ಲಿ,ಸುಪರ್ ಮಾರ್ಕೆಟ್ ರಸ್ತೆ, ಜೇವರ್ಗಿ ರಸ್ತೆ, ಕೋರಂಟಿ ಹನುಮಾನ್ ರಸ್ತೆ, ನಗರದ ಶರಣಬಸವೇಶ್ವರ ದೇವಸ್ಥಾನ ಬಳಿಯಿರುವ ರಸ್ತೆಯೂ ಸಂಪೂರ್ಣವಾಗಿ ಮಳೆಯ ನೀರಿನಿಂದ ಜಲಾವೃತವಾಗಿದ್ದು, ವಾಹನ ಸವಾರರಿಗೆ ತೊಂದರೆಯುಂಟಾಯಿತು.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಇನ್ನೇರಡು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.